Gurudatta Hegde ಮ್ಯಾನ್ಯುಯಲ್‌ಸ್ಕಾವೆಂಜರ್‌ಗಳು ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಹೋಟೆಲ್, ಬಸ್‌ಸ್ಟ್ಯಾಂಡ್‌ಮತ್ತು ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಚತಾ ಕಾರ್ಯ ಮಾಡುವವರಿಗೆ ವಿವಿಧ ಇಲಾಖಾ ನಿಗಮಗಳಲ್ಲಿ ಗುರುತಿನ ಚೀಟಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇನ್ನೂ ಹಲವು ಸಫಾಯಿ ಕರ್ಮಚಾರಿಗಳು, ಸ್ವಚ್ಚತಾ ಕಾರ್ಮಿಕರಿಗೆ ಗುರುತಿನ ಚೀಟಿ ದೊರೆಯದಿರುವ ಬಗ್ಗೆ ಮಾಹಿತಿ ಇದ್ದು, ಕಾರ್ಮಿಕ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅವರಿಗೆ ಗುರುತಿನ ಚೀಟಿಗಳನ್ನು ಕೊಡಿಸುವಲ್ಲಿ ಶ್ರಮಿಸುವಂತೆ ಅವರು ಸೂಚಿಸಿದರು.
ಮ್ಯಾನ್ಯುಯಲ್‌ಸ್ಕಾವೆಂಜಿಂಗ್‌ನಿಷೇಧ ಕಾಯ್ದೆ ಜಾರಿಗೊಂಡಿದ್ದರೂ, ದುಷ್ಟಪದ್ದತಿ ನಿರ್ಮೂಲನೆಗೊಳಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಲೇ ಇವೆ. ಜಿಲ್ಲೆಯಲ್ಲಿ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ದುರ್ಬಲ ವರ್ಗದವರನ್ನು ಸಬಲರನ್ನಾಗಿ ಮಾಡಲು ಹಾಗೂ ಪ್ರತಿಯೊಬ್ಬ ವ್ಯಕ್ತಿಯೂ ವ್ಯಕ್ತಿಗೌರವದಿಂದ ತನ್ನ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸಹಕರಿಸುವಂತೆ ಮನವಿ ಮಾಡಿದ ಅವರು, ಅದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.
Gurudatta Hegde ಪೌರ ಕಾರ್ಮಿಕರ ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ಲಭ್ಯವಾಗಬಹುದಾದ ಉದ್ಯೋಗಾವಕಾಶಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಸೌಲಭ್ಯ ಪಡೆದುಕೊಳ್ಳುತ್ತಿರುವವರ ಹಾಗೂ ಸಂಸ್ಥೆಗಳಿಂದ ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ಒದಗಿಸುವಂತೆ ಅವರು ಸೂಚಿಸಿದರು. ಅವಕಾಶ ವಿದ್ದಲ್ಲಿ ಅರ್ಹರನ್ನು ಗುರುತಿಸಿ, ಉದ್ಯೋಗಾವಕಾಶಗಳನ್ನು ಒದಗಿಸುವಂತೆ ಸೂಚಿಸಿದರು.
ಮ್ಯಾನ್ಯುಯಲ್‌ಸ್ಕಾವೆಂಜರ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವಲ್ಲಿ ಹಾಗೂ ಅವರ ಆರೋಗ್ಯದಿಂದಿರಲು ಉತ್ತಮ ಚಿಕಿತ್ಸೆ ಅಥವಾ ಆರೋಗ್ಯ ತಪಾಸಣೆ ಮಾಡಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳು ಗಮನಹರಿಸಬೇಕೆಂದು ಅವರು ಸೂಚಿಸಿದರು.
ಭದ್ರಾವತಿಯಲ್ಲಿ ಖಾಯಂ ಪೌರಕಾರ್ಮಿಕರಿಗಾಗಿ ಕಾಯ್ದಿರಿಸಲಾಗಿದ್ದ ಮನೆಗಳಲ್ಲಿ ಗುತ್ತಿಗೆ ಕಾರ್ಮಿಕರು ಅಕ್ರಮ ಪ್ರವೇಶ ಮಾಡಿ, ವಾಸವಾಗಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೊಲೀಸ್‌ರಕ್ಷಣೆಯೊಂದಿಗೆ ಸಮಗ್ರ ದಾಖಲೆಗಳನ್ನು ಹೊಂದಿರುವ ಅರ್ಹರಿಗೆ ಮನೆಗಳನ್ನು ತೆರವು ಮಾಡಿಸಿಕೊಡಲು ಕ್ರಮ ವಹಿಸುವಂತೆ ಸೂಚಿಸಿದರು.
ಅಸುರಕ್ಷತೆ ಮತ್ತು ಅಪಾಯಕಾರಿಯಾಗಿರುವ ಕಾರ್ಯದಲ್ಲಿ ತೊಡಗಿರುವ ಸಫಾಯಿ ಕರ್ಮಚಾರಿಗಳಿಗೆ ಅವರ ಕುಟುಂಬದ ಅವಲಂಬಿತರಿಗೆ ಕಡ್ಡಾಯವಾಗಿ ವಿಮೆ ವ್ಯಾಪ್ತಿಗೊಳಪಡಿಸಲು ಸಂಬಂಧಿಸಿದ ಪ್ರಾಧಿಕಾರಗಳು ಕ್ರಮ ಕೈಗೊಂಡು ಅವರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ಅವರು ಸೂಚಿಸಿದರು.
ಮ್ಯಾನ್‌ಹೋಲ್‌ಮತ್ತು ಅಪಾಯಕಾರಿ ಸ್ಥಳಗಳಲ್ಲಿ ಸ್ಥಚ್ಚತಾ ಕಾರ್ಯಕ್ಕೆ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳುತ್ತಿರುವುದು ಅಕ್ಷಮ್ಯ. ಈ ಬಗ್ಗೆ ಸಫಾಯಿ ಕರ್ಮಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈ ಅನಿಷ್ಟವನ್ನು ಹೋಗಲಾಡಿಸಲು ಮ್ಯಾನ್ಯುಯಲ್‌ಸ್ಕಾವೆಂಜಿಂಗ್‌ನೇಮಕಾತಿ ನಿಷೇಧ ಅವರ ಪುನರ್ವಸತಿ ಕಾಯ್ದೆ ಅನುಷ್ಟಾನಕ್ಕೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬಾಲ್ಯವಿವಾಹ ನಿಯಂತ್ರಣಕ್ಕೆ ಸಮುದಾಯದ ಮುಖಂಡರು ಗಮನಹರಿಸಿ : ಗುರುದತ್ತ ಹೆಗಡೆ
ಶಿವಮೊಗ್ಗ : ಅಕ್ಟೋಬರ್ 14 : (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಗುರುತಿಸಲಾಗಿರುವ ಬಾಲ್ಯವಿವಾಹ ಮತ್ತು ಫೋಕ್ಸೊ ಪ್ರಕರಣಗಳಲ್ಲಿ ಶೇ.60ರಷ್ಟು ಪರಿಶಿಷ್ಟ ಜಾತಿ ಪಂಗಡದ ಅಭ್ಯರ್ಥಿಗಳೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದರ ನಿಯಂತ್ರಣಲ್ಲಿ ಸಮುದಾಯದ ಮುಖಂಡರು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿಂದಿನ ವರ್ಷಗಳಲ್ಲಿ ನಡೆದ ಪ್ರಕರಣಗಳನ್ನು ಗಮನಿಸಿದಾಗಿ ಇತ್ತೀಚಿನ ವರ್ಷಗಳಲ್ಲಿ ಅವುಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನವಹಿಸಿದ್ದರಿಂದಾಗಿ ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ ಎಂದರು.
ಹಲವು ವರ್ಷಗಳಿಂದ ಇತ್ಯರ್ಥವಾಗದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ವಿಶೇಷ ಗಮನಹರಿಸಲಾಗಿದೆ. ಅಲ್ಲದೇ ಪರಿಶೀಲನೆಯ ನಂತರ ಋಜುವಾತಾದ 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಸುಳ್ಳು ಜಾತಿ ಪ್ರಕರಣದಡಿ ಸಲ್ಲಿಕೆಯಾದ ಮೂರು ಪ್ರಕರಣಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ನೈಜತೆಯ ಪರಿಶೀಲನೆಗಾಗಿ ಡಿ.ಸಿ.ಆರ್.ಇ. ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದ್ದು, ವರದಿ ಬಂದ ನಂತರ ಕ್ರಮ ಅಗತ್ಯ ಕ್ರಮ ಕೈಗೊಳ್ಳಳಾಗುವುದು ಎಂದವರು ನುಡಿದರು.
ಈಗಾಗಲೇ ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳ ಕುರಿತು ಪರಿಹಾರ ಧನ 138.00ಲಕ್ಷ ರೂ.ಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಅನುದಾನ ಬಂದ ನಂತರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. 2024ನೇ ಸಾಲಿನಲ್ಲಿ ದಾಖಲಾದ ಒಟ್ಟು 114ಪ್ರಕರಣಗಳ ಪೈಕಿ 90ಪ್ರಕರಣಗಳ ಕುರಿತು ಚಾರ್ಜ್‌ಶೀಟ್‌ಸಲ್ಲಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ದಾಖಲಾದ 98ಪ್ರಕರಣಗಳ ಪೈಕಿ 64ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಮುಜರಾಯಿ ದೇವಸ್ತಾನಗಳಲ್ಲಿ ಎಲ್ಲಾ ಜಾತಿ-ಜನಾಂಗದವರಿಗೆ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಯಾವುದೇ ಜಾತಿ ತಾರತಮ್ಯ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಪ್ರಚಾರ ಫಲಕ ಅಳವಡಿಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಶಿವಮೊಗ್ಗ ಬಸ್‌ಸ್ಟ್ಯಾಂಡ್‌ಹಿಂಭಾಗದಲ್ಲಿನ ಬುದ್ಧನಗರದ ಅತ್ಯಲ್ಪ ಪ್ರದೇಶದಲ್ಲಿ ಹಲವು ದಶಕಗಳಿಂದ ಕನಿಷ್ಟ ಜೀವನ ನಡೆಸುತ್ತಿರುವ ನಿರ್ವಸತಿಗರಿಗೆ ವಸತಿ ಸೌಲಭ್ಯ ಕಲ್ಪಿಸಿ. ಅಂಬೇಡ್ಕರ್‌ನಗರದಲ್ಲಿನ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ. ಮಂಜುನಾಥ್, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು.
ಅಪ್ರಾಪ್ತ ವಿವಾಹಿತರನ್ನು ಗುರುತಿಸಿ, 2ಮಕ್ಕಳು ಜನಿಸಿದ ನಂತರ ಮದುವೆಯ ವರನನ್ನು ಕಾನೂನು ಸುಪರ್ದಿಗೆ ವಹಿಸಿಕೊಡುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್‌ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ತನಿಖೆ ನಡೆಸಿ, ಮಾನವೀಯ ನೆಲೆಯಲ್ಲಿ ಕ್ರಮ ವಹಿಸಬೇಕು.
-ಬೂದಿಗೆರೆ ಬಸವರಾಜ
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ನಿಯೋಜಿಸಲು ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡುವಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಮಿತಿ ಸದಸ್ಯರು ಸಭೆಯ ಗಮನಸೆಳೆದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳು ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇ ಮಾಡುವಂತೆ ಹಾಗೂ ವಿಸ್ತೃತ ವರದಿ ನೀಡುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ, ಸಮಿತಿ ಸದಸ್ಯರಾದ ರುದ್ರಪ್ಪ, ದಿನೇಶ್‌ಪಟೇಲ್, ಓಂಪ್ರಕಾಶ್, ನಾಗರಾಜ್, ಬೂದಿಗೆರೆ ಬಸವರಾಜ್, ಮಂಜುನಾಥ್, ಶಿವಬಸಪ್ಪ ಮತ್ತಿರರು ಉಪಸ್ಥಿತರಿದ್ದರು.
