B Khata ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.
B Khata ಈ ಕಾರ್ಯಕ್ರಮದಲ್ಲಿ, ಶಾಸಕರಾದ ವಿಜಯಾನಂದ್ ಕಾಶಾಪ್ಪನವರ್, ಶ್ರೀನಿವಾಸ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತಿತರರು ಉಪಸ್ಥಿತರಿದ್ದರು.
