Friday, December 5, 2025
Friday, December 5, 2025

Priyank Kharge ಕೆಲವು ದಿನಗಳಿಂದ ಬೆದರಿಕೆ ಮತ್ತು ನಿಂದನೆಯ ಕರೆಗಳು ಬರುತ್ತಿವೆ- ಸಚಿವ ಪ್ರಿಯಾಂಕ ಖರ್ಗೆ

Date:

Priyank Kharge RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?

ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿ.ವೈ.ವಿಜಯೇಂದ್ರ, ಆರ್.ಅಶೋಕ.ಸಿ.ಟಿ.ರವಿ,ಕಾರ್ಕಳ ಸುನೀಲ್,ಪ್ರತಾಪ್ ಸಿಂಹ, ಚಲವಾದಿ ನಾರಾಯಣ ಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ.
ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ.

Priyank Kharge ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ.

RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.
ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...