Thursday, March 19, 2026
Thursday, March 19, 2026

Quiz Competition ಜಿಲ್ಲಾಮಟ್ಟದ “ಕ್ವಿಜ್”ಕಾರ್ತೀಕ್ & ದೀಕ್ಷಿತ್ ದ್ವಿತೀಯ ಸ್ಥಾನ

Date:

Quiz Competition ಕರ್ನಾಟಕ ಅರಣ್ಯ ಇಲಾಖೆ, ಶಿವಮೊಗ್ಗ ವನ್ಯಜೀವಿ ವಿಭಾಗ ಮತ್ತು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ಶರಾವತಿನಗರ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ, ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಸುಮಾರು 550ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 6 ಸುತ್ತುಗಳ ಮುಖಾಂತರ ಸೆಮಿಪೈನಲ್‌ ಗೆ 100 ತಂಡಗಳು ಆಯ್ಕೆಯಾಗಿದ್ದು, ಆದರಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಹತ್ತನೇ ತರಗತಿಯ ದೀಕ್ಷಿತ್ ಎಂ ಎನ್.ಮತ್ತು ಕಾರ್ತಿಕ್ ಪಿ. ಈ ಪ್ರತಿಭಾನ್ವಿತರು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ, ಮೊದಲ ಸುತ್ತಿನಿಂದ ಅಂತಿಮ ಸುತ್ತಿನವರೆಗೂ ಉತ್ತಮ ಚಾಣಾಕ್ಷತೆ, ಬುದ್ದಿವಂತಿಕೆಯಿಂದ ಭಾಗವಹಿಸಿ, ದ್ವಿತೀಯ ಸ್ಥಾನ,15,000 ಸಾವಿರ ನಗದು ಬಹುಮಾನ,ಪ್ರಶಸ್ತಿ Quiz Competition ಪತ್ರ ಮತ್ತು ಅತ್ಯಾಕರ್ಷಕ ಟ್ರೋಪಿಯನ್ನು ತಮ್ಮದಾಗಿಸಿ ಕೊಂಡಿರುತ್ತಾರೆ. ಹಾಗೂ ಸಾನ್ವಿ ವಿ. ಭಾರದ್ವಾಜ್‌ ಮತ್ತು ತಿಷಾರಾಜ್ ಪುರೋಹಿತ್‌ ಇವರು 5ನೇ ಸ್ಥಾನ ಪಡೆಯುವುದರ ಮೂಲಕ ಸಂಸ್ಥೆಗೂ ಹಾಗೂ ಜಿಲ್ಲೆಗೂ ಕೀರ್ತಿ ತಂದುಕೊಟ್ಟಿರುತ್ತಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮುಂದಿನ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು,ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ದಿವ್ಯ ಕರಣಮ್ ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...