Saturday, September 26, 2026
Saturday, September 26, 2026

Thawar Chand Gehlot ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರಿಂದ ಪ್ರಮಾಣ ವಚನ ಸ್ವೀಕಾರ

Date:

Thawar Chand Gehlot ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೇಟ್ ‌ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ಗೌರವಾನ್ವಿತ
ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

Thawar Chand Gehlot ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರೆ, ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಅಶಿತ್ ಮೋಹನ್ ಪ್ರಸಾದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರುಗಳು ಹಾಗೂ ಮಾಹಿತಿ ಆಯೋಗದ ನಿವೃತ್ತ ಮಾಹಿತಿ ಆಯುಕ್ತರು ಸೇರಿದಂತೆ ಇತರೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...