S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 16ರ ಜ್ಯೋತಿ ನಗರಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಉದ್ಯಾನವನದ ಪ್ರದೇಶದಲ್ಲಿ ನಡೆದಿರುವ ಅನಧಿಕೃತ ಒತ್ತುವರಿ (ಅಕ್ರಮ ಅತಿಕ್ರಮಣ) ಕುರಿತು ಸ್ಥಳೀಯ ನಿವಾಸಿಗಳಿಂದ ಸಮಗ್ರ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ, ಬಡಾವಣೆಯಲ್ಲಿನ ಇತರ ಮೂಲಭೂತ ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಲಾಯಿತು ಮತ್ತು ಆ ಸಮಸ್ಯೆಗಳ ನಿವಾರಣೆ ಹಾಗೂ ಬಡಾವಣೆಯ ಸಮಗ್ರ ಅಭಿವೃದ್ಧಿಯ ಕುರಿತು ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
S.N. Channabasappa ಭೇಟಿಯ ವೇಳೆ ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
