C.M.Siddharamaiah ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ನಡೆದ ವಿಶ್ವ ಆಹಾರ ದಿನಾಚರಣೆಯ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ.
ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು.
C.M.Siddharamaiah ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ.
ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ
ಎಂದು ಸಿದ್ಧರಾಮಯ್ಯ ವಿಶ್ವ ಆಹಾರ ದಿನದ ಮಹತ್ವ ಒತ್ತಿ ಹೇಳಿದರು
ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಶಾಸಕ ರವಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
