Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಅ. 27 ರಂದು ಆಯೋಜಿಸಲಾಗಿದ್ದು, ಇಪಿಎಫ್‌ಒ ಮತ್ತು ಇಎಸ್‌ಐಸಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಲಿದ್ದಾರೆ.
Nidhi Apke Nikat ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ, ಗಾಂಧಿ ಪಾರ್ಕ್ ಎದುರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ವಿದ್ಯಾದಾಯಿನಿ ಶಾಲೆ, ಕೆ.ಆರ್.ನಗರ, ಹರಿಹರ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
Nidhi Apke Nikat ಅ. 27: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
Date:
