Atma Yojana 2025-26 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
Atma Yojana ನಿಗದಿತ ನಮೂನೆ ಅರ್ಜಿಯನ್ನು ನ.3 ರ ಸಂಜೆ 5.30 ರೊಳಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಕರ್ಪ ಕೇಂದ್ರದ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Atma Yojana ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
Date:
