Saturday, December 6, 2025
Saturday, December 6, 2025

U.T. Khader Farid ಸ್ಪೀಕರ್ ಯು.ಟಿ.ಖಾದರ್ ನೇತೃತ್ವದ ತಂಡದಿಂದ ನಾರ್ವೆ ಸಂಸತ್ತಿಗೆ ಭೇಟಿ

Date:

U.T. Khader Farid ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಸಂದರ್ಭದಲ್ಲಿ ಅವರು ನಾರ್ವೆಯ ಮಾಜಿ ಸಚಿವರೂ ಹಾಗೂ ಮಾಜಿ ಸಂಸದರೂ ಆಗಿದ್ದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಭೇಟಿಯ ವೇಳೆ, ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ, ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು. ಸಭಾಧ್ಯಕ್ಷರಾದ
ಖಾದರ್ ಫರೀದ್ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪ್ರಮುಖ ಯೋಜನೆಗಳನ್ನು ವಿವರಿಸಿದರು.

ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕ ಮತ್ತು ನಾರ್ವೆ ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

U.T. Khader Farid ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಹಾಗೂ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...