Saturday, December 6, 2025
Saturday, December 6, 2025

Kittur Chennamma ಕಿತ್ತೂರು ಚೆನ್ನಮ್ಮನವರ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಕರ್ನಾಟಕ ಸರ್ಕಾರ ಮಾಡಬೇಕಿದೆ- ಸಚಿವ ವಿ.ಸೋಮಣ್ಣ

Date:

Kittur Chennamma ನವದೆಹಲಿಯ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣನವರ ನೇತೃತ್ವದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ಮದಿನೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಗಿತ್ತು.

ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೊಮಣ್ಣ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪೂರಕವಾಗಿ 2025. ನೇ ಅಕ್ಟೋಬರ್ 24 ರಂದು ದೆಹಲಿಯ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸ್ವಾತಂತ್ರ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ದಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಕೇಂದ್ರ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದಾರೆ.

Kittur Chennamma ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯರಾದ ಶ್ರೀಮತಿ ಸುಧಾಮೂರ್ತಿಯವರು, ಶ್ರೀ ಶ್ರೀ ಜಯಮೃತ್ಯುಂಜಯ ಸ್ವಾಮಿಗಳು, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷರು, ದೆಹಲಿ ಕನ್ನಡಿಗರು, ದೆಹಲಿಯಲ್ಲಿನ ಕನ್ನಡ ಮಾಧ್ಯವ ಮಿತ್ರರುಗಳು ಭಾಗಿಯಾಗಿ ರಾಣಿ ಚೆನ್ನಮ್ಮನವರ ವಿಜಯೋತ್ಸವದ ಮತ್ತು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಲೋಕಸಭಾ ಸಚಿವಾಲಯ ಮತ್ತು ರೇಲ್ವೆ ಸಚಿವಾಲಯದ ಅಧಿಕಾರಿಗಳಿಗೆ ಮತ್ತು ಈ ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲಾ ದೆಹಲಿ ಕನ್ನಡಿಗರಿಗೆ ಅಭಿನಂದನೆಯನ್ನು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...