Ishwara Khandre ಸಕ್ರೆಬೈಲು ಆನೆ ಬಿಡಾರದಲ್ಲಿ ನಾಲ್ಕು ಆನೆಗಳು ಗಾಯ ಗೊಂಡು ಗಂಭೀರ ಸ್ಥಿತಿಯಲ್ಲಿ ರುವ ವಿಷಯಕ್ಕೆ ಕಾರಣ ಕೇಳಿ ಒಂದು ವಾರದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಮುಖೇನ ಸೂಚನೆ ನೀಡಿದ್ದಾರೆ.
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಬಾಲಣ್ಣ ವಿಕ್ರಾಂತ್, ಅಡ್ಕಬಡ್ಕ ಮತ್ತು ಸಾಗರ ಆನೆಗಳು ಗಾಯಗೊಂಡು ಬಳಲುತ್ತಿವೆ. ಬಿಡಾರದಲ್ಲಿ ಪಶುವೈದ್ಯರ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ.
ಇದರ ಬಗ್ಗೆ ತುರ್ತು ಕ್ರಮ ವಹಿಸಬೇಕು. ಬಾಲಣ್ಣ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿ ಕಾರಿ, ಅಧಿಕಾರಿ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮದ ಶಿಫಾರಸ್ಸಿನೊಂದಿಗೆ 1ವಾರದೊಳಗೆ ಸಮಗ್ರ ವರದಿಯನ್ನು ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕೆಂದು ಸಚಿವರು ಪತ್ರದಲ್ಲಿ ಸೂಚನೆ ನೀಡಿದ್ದಾರೆ.
Ishwara Khandre ರಾಜ್ಯದಲ್ಲಿರುವ ಎಲ್ಲ ಆನೆ ಬಿಡಾರಗಳು ಮತ್ತು ಮೃಗಾಲಯಗಳಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಲೇಬೇಕು.
ವೈದ್ಯರ ಕೊರತೆ ಇದ್ದಲ್ಲಿ ಗುತ್ತಿಗೆ ಆಧಾರ ಅಥವಾ ನಿಯೋಜನೆ ಮೇಲೆ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು
ಎಂದು ಹಿಂದೆ ಹಲವು ಸಭೆಗಳಲ್ಲಿ ಅಧಿ ಕಾರಿಗಳಿಗೆ ತಿಳಿಸಲಾಗಿದೆ.
