Canarabank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ. 13 ರಿಂದ 31 ದಿನಗಳ ನಿರುದ್ಯೋಗಿ ಪುರುಷರಿಗೆ ಉಚಿತವಾಗಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಿದ್ದು, 18 ರಿಂದ 45 ವರ್ಷ ವಯೋಮಿತಿಯ ಆರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.
ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಅ. 30 ಬೆಳಗ್ಗೆ 10.00ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವುದು.
Canarabank Rural Self Employment Training Institute ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 8970476050/ 9591514154/ 9686248369 / 9505894247 ಗಳಿಗೆ ಸಂಪರ್ಕಿಬಹುದು.
