ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮೂದಾಯ ಬೀಜ ಬ್ಯಾಂಕ್ ಸ್ಥಾಪಿಸುತ್ತಿದ್ದು, ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರದಾಯಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ, ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.
ಈ ಕಾರ್ಯಕ್ರಮದಡಿ ಆಯ್ಕೆಯಾದ ಬೆಳೆಗಳೆಂದರೆ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು, ಹುಚ್ಚೆಳ್ಳು, ಕುಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಸಲಹಾ ಸಮಿತಿ ಶಿಫಾರಸು ಮಾಡಲು ಇತರೆ ಬೆಳೆಗಳಲ್ಲಿ ದೇಸಿ ತಳಿಗಳಿದ್ದರೆ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವುದು.
Department of Agriculture ಇತ್ತಿಚೆಗೆ ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಮೂಲ ಸಮೀಕ್ಷೆ ಮೂಲಕ ಗುರುತಿಸಿ ಸಂರಕ್ಷಣೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದ್ದು, ಯೋಜನೆಯಲ್ಲಿ ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು. ಬೀಜ ಬ್ಯಾಂಕ್ ನಲ್ಲಿರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ಧರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ, ಪುನರುತ್ಪಾದಕ ಕೃಷಿ ಮತ್ತು ಇತರೆ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.
ಯೋಜನೆಯಡಿ ಆಸಕ್ತಿಯುಳ್ಳ ರೈತರು ನೋಂದಾಯಿಸಿಕೊಳ್ಳಲು ಅವಕಾಶವಿದ್ದು ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
