Thursday, June 18, 2026
Thursday, June 18, 2026

CM Siddharamaiah ಕೆಎಸ್ ಡಿ ಎಲ್ ನಿಂದ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

Date:

CM Siddharamaiah ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ ರೂ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಚಿವ ಎಂ.ಬಿ.ಪಾಟೀಲ ಅವರು ಮಾತನಾಡಿ, ಕೆ.ಎಸ್.ಡಿ.ಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ ರೂ 1,700 ಕೋಟಿ ವಹಿವಾಟು ನಡೆಸಿ, ರೂ 451 ಕೋಟಿ ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ ರೂ 54 ಕೋಟಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ ರೂ 108 ಕೋಟಿ ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ ರೂ 27 ಕೋಟಿ ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.

CM Siddharamaiah ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...