S.N.Chennabasappa ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ನಿರ್ಮಿಸಲು ನಿವೇಶನಕ್ಕೆ ಶಾಸಕರ ಅನುದಾನದಿಂದ 20 ಲಕ್ಷ ರೂ. ದೇಣಿಗೆ ನೀಡಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ 2024-25ನೇ ಸರ್ವ ಸದಸ್ಯರ ಮಹಾಸಭೆ, ಪ್ರತಿಭಾ ಪುರಸ್ಕಾರ, ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಘಟನೆಯು ಸಂಸ್ಥೆಗೆ ಬಲ ನೀಡುತ್ತದೆ. ಸಂಸ್ಥೆಯಲ್ಲಿನ ಸದಸ್ಯರು ಸಕ್ರಿಯರಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಭದ್ರಾವತಿ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಸಂಘ ಸಂಸ್ಥೆಗಳು ಸದೃಢವಾಗಿರಲು ಸದಸ್ಯರ ಸಹಕಾರ ಬೇಕು. ನಾವು ಯಾವುದೇ ಹೋರಾಟ ಮಾಡಲು ಸಮಾಜ ಮುಖ್ಯ. ಎಲ್ಲರೂ ಪಕ್ಷಭೇದ ಮರೆತು ಸಮಾಜಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಶ್ರೀ ಬಸವೇಶ್ವರ ವೀರಶೈವ ಸಮಾಜ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ನಮ್ಮ ಸಮಾಜದ ಎಲ್ಲ ಒಳಪಂಗಡಗಳು ಒಟ್ಟಾಗಬೇಕು. ಗಾಣಿಗ ಸಮಾಜ ತುಂಬಾ ಬಲಿಷ್ಠವಾಗಬೇಕು. ನಮ್ಮ ಸಮಾಜದ 8 ಶಾಸಕರು, ಇಬ್ಬರು ಸಂಸದರು ಹಾಗೂ ಸಚಿವರು ಇದ್ದಾರೆ. ನಮ್ಮ ಸಮಾಜವನ್ನು ಒಗ್ಗೂಡಿಸುವ ಕೆಲಸ ಎಲ್ಲರಿಂದ ಆಗಬೇಕು ಎಂದು ಹೇಳಿದರು.
ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಘ ಸ್ಥಾಪನೆಯಾಗಿ 16 ವರ್ಷ ಆಗಿದ್ದು, ಈಗ ಭವನ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಎಲ್ಲರೂ ಅನುದಾನ ನೀಡಬೇಕು. ಇದರಿಂದ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
S.N.Chennabasappa ಬಿ.ಕೆ.ಜಗನ್ನಾಥ್ ಅವರು ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು.
ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಕಿರಣ್‌ಕುಮಾರ್, ಎನ್.ಬಿ.ರಾಜಶೇಖರ್, ಪ್ರೊ. ಎ.ಎಸ್.ಚಂದ್ರಶೇಖರ್, ಭಾರತಿ ಚಂದ್ರಶೇಖರ್, ವಾಗೀಶ್ ಹಾಗೂ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ವಿವಿಧ ತಾಲೂಕುಗಳ ಅಧ್ಯಕ್ಷರು. ಕಾರ್ಯದರ್ಶಿಗಳು ಸದಸ್ಯರುಗಳು ಉಪಸ್ಥಿತರಿದ್ದರು.
