World Stroke Day ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು ಪಾರ್ಶ್ವವಾಯು ಕುರಿತು ಜನರಲ್ಲಿ ಅರಿವು ಮೂಡಿಸಲು ಅ.29 ರಂದು ವಾಕಾಥಾನ್ ಹಮ್ಮಿಕೊಂಡಿದೆ.
ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ನಿಂದ ಬೆಳಿಗ್ಗೆ 6:15ಕ್ಕೆ ಪ್ರಾರಂಭವಾಗುವ ವಾಕಾಥಾನ್ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಆವರಣದಲ್ಲಿಯೇ ಮುಕ್ತಾಯಗೊಳ್ಳಲಿದೆ. ನರರೋಗ ಶಾಸ್ತ್ರಜ್ಞ ಡಾ. ಶಿವರಾಮ ಕ್ರಿಷ್ಣಾ ಜಾಥಾವನ್ನು ಉದ್ಘಾಟಿಸಲಿದ್ದಾರೆ.
World Stroke Day ಸಾರ್ವಜನಿಕರು ಬೃಹತ ಪ್ರಮಾಣದಲ್ಲಿ ಈ ಜಾಗೃತಿ ನಡಿಗೆಯಲ್ಲಿ ಪಾಲ್ಗೊಂಡು ಇದನ್ನು ಯಶಸ್ವಿಗೊಳಿಸುವಂತೆ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್ ಪಿ ಜಾನ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08884492830
