Saturday, June 20, 2026
Saturday, June 20, 2026

ದೈನಿಕ ಮುದ್ರಣಗೊಳ್ಳುವ ಪತ್ರಿಕಾ ಸಂಪಾದಕರ ಅಧ್ಯಕ್ಷರಾಗಿ “ತುಂಗಾತರಂಗ”ದ ಎಸ್.ಕೆ.ಗಜೇಂದ್ರ ಸ್ವಾಮಿ ಆಯ್ಕೆ

Date:

ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಹ್ಯಾದ್ರಿ ದಿನಪತ್ರಿಕೆಯ ಸಂಪಾದಕ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದ್ದು, ಖಜಾಂಚಿಯಾಗಿ ಹೊಸ ನಾವಿಕ ದಿನಪತ್ರಿಕೆಯ ಸಂಪಾದಕ ರಾಕೇಶ್ ಡಿಸೋಜಾ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ಪತ್ರಿಕಾ ಸಂಪಾದಕರಾದ ಜಿ. ಪದ್ಮನಾಭ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಪತ್ರಿಕಾ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಈ ಮೂವರನ್ನು ಆಯ್ಕೆ ಮಾಡಲಾಗಿದೆ.
ಸಂಘದ ಉಪಾಧ್ಯಕ್ಷರಾಗಿ ರಂಜಿತ್, ಭರತೇಶ್, ಹಿತಕರ್ ಜೈನ್, ಸುಭಾಷ್
ಕಾರ್ಯದರ್ಶಿಗಳಾಗಿ ನಾಗರಾಜ್ ಶೆಣೈ, ಲಿಯಾಕತ್, ರಾಘವೇಂದ್ರ, ಸಹ ಕಾರ್ಯದರ್ಶಿಗಳಾಗಿ ಜಿ. ಚಂದ್ರಶೇಖರ, ಹೆಚ್.ಎನ್. ಮಂಜುನಾಥ್ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಂಘದ ಹಿರಿಯ ನಿರ್ದೇಶಕರಾದ ಎನ್. ಮಂಜುನಾಥ್ ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್ ಅವರು ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ, ಸಂಘದ ಮೂಲಕ ಶಿವಮೊಗ್ಗ ಜಿಲ್ಲಾ ಪತ್ರಿಕೆಗಳ ಒಳಿತಿಗೆ ಕಾರ್ಯನಿರ್ವಹಿಸಲು ನಿರ್ವಹಿಸಲು ಕೋರಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಗಳ 25ಕ್ಕೂ ಹೆಚ್ಚು ಸಂಪಾದಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...