Friday, March 20, 2026
Friday, March 20, 2026

ಭಾವಿ ಉದ್ಯಮಿಗಳಾಗುವ ವಿದ್ಯಾರ್ಥಿಗಳಲ್ಲಿ ಉದ್ಯಮಿಗಳ ಯಶಸ್ಸಿನ ಹಿಂದಿರುವ ಸೃಜನಶೀಲತೆ, ಹೂಡಿಕೆ & ಜಾರಿ ತರುವ ನಿಯಮಗಳ ಬಗ್ಗೆ ಅರಿವಿರಬೇಕು- ಬಿ.ಗೋಪಿನಾಥ್

Date:

Incubation ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರವನ್ನು MBA ‍& MCA ಆಡಿಟೋರಿಯಂ ‌JNN ಕಾಲೇಜ್‌ ಆಫ್‌ ಇಂಜಿನಿಯರಿಂಗ್, ಶಿವಮೊಗ್ಗದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಗೋಪಿನಾಥ್‌ ಬಿ. ಅಧ್ಯಕ್ಷರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ(ರಿ). ಶಿವಮೊಗ್ಗ ಇವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ, ವಿದ್ಯಾರ್ಥಿಗಳಿಗೆ ಅನೇಕ ಉದ್ಯಮಿಗಳ ಯಶಸ್ಸಿನ ಹಿಂದೆ ಇರುವ Innovation, Investment and Implementation ಎಂಬ ಮೂರು ನಿಯಮಗಳನ್ನು ಅಳವಡಿಸಿ ಹೇಗೆ ಯಶಸ್ವಿ ಉದ್ಯಮದಾರರಾಗಲು ಉತ್ತೇಜಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಶ್ರೀ ಜೋಯಿಸ್‌ ರಾಮಾಚಾರ್‌ ಇವರು ಮಾತನಾಡಿ, ವಿದ್ಯಾರ್ಥಿಗಳಿಗೆ ಉದ್ಯಮದಾರರಾಗಲು ಹೆಚ್ಚಿನ ಸ್ಪೂರ್ತಿದಾಯಕ ವಿಷಯವನ್ನು ಪ್ರಸ್ತಾಪಿಸಿದರು.

ಸಂಪನ್ಮೂಲಕರಾದ ಶ್ರೀ ಗೋಪಿನಾಥ್‌ ಇವರು ವಿದ್ಯಾರ್ಥಿಗಳಿಗೆ ಉದ್ಯಮದಾರರಾಗಲು ಸರ್ಕಾರದ ವಿವಿಧ ಯೋಜನೆಗಳು, ಬ್ಯಾಂಕ್‌ ಗಳಿಂದ ದೊರಕುವ ಸಾಲ ಸೌಲಭ್ಯಗಳು ಮತ್ತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಶ್ರೀ ಹೆಚ್‌ ಸುರೇಶ್‌, ಜಿಲ್ಲಾ ಲೀಡ್‌ ಬ್ಯಾಂಕ್‌ ಮುಖ್ಯ ವ್ಯವಸ್ಥಾಪಕರಾದ ಶ್ರೀ ಹನುಮಂತಪ್ಪ, MCA ವಿಭಾಗದ ಡಾ. ಹೇಮಂತ್‌ ಕುಮಾರ್‌, ಸಹಾಯಕ ಪ್ರಾಧ್ಯಾಪಕರಾದ ಅರುಣ್‌ ಕುಮಾರ್‌ ಕೆ.ಎಲ್.‌ ಹಾಗೂ ಇನ್ನಿತರರು ಪ್ರಮುಖರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...