Sardar Vallabhabhai Patel ಸರ್ದಾರ್ ವಲಭಭಾಯ್ ಪಟೇಲ್‌ರವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ರಾಷ್ಟ್ರೀಯ ಏಕತಾ ದವಿಸದ ಪ್ರತಿಜ್ಞಾ ವಚನ ಭೋಧಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ದಾರ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ, ಗೌರವ ನಮನ ಸಲ್ಲಿಸಿದರು.
Sardar Vallabhabhai Patel ಈ ಸಂದರ್ಭದಲ್ಲಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಶಾಸಕ ಬಸವಂತಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ.ಕಾವೇರಿ, ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಕಾರ್ಯದರ್ಶಿ ಜಗದೇಶ ಸೇರಿದಂತೆ ಹಿರಿಯ ಅಧಿಕಾರಿಗಳು, ನೌಕರರು ಉಪಸ್ಥಿತರಿದ್ದರು.
