ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ಮೂಲದ ಗೃಹಿಣಿ ಅನುಮಾನ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನ ವಿಷ ಕೊಟ್ಟು ಕೊನೆಗೆ ಯತ್ನಿಸಿರುವ ಆರೋಪ ನಡೆದಿದ್ದು ಚಿಕಿತ್ಸೆ ಫಲಕಾರಿಯಾಗದೇ ಗೃಹಿಣಿ ಪೂಜಾ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಶಂಕರಹಳ್ಳಿ ಈಶ್ವರಪ್ಪ ಎಂಬುವವರ ಪುತ್ರಿ ಪೂಜಾ ಅವರು ಮೂರು ವರ್ಷಗಳ ಹಿಂದೆ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬುವರೊಂದಿಗೆ ವಿವಾಹವಾಗಿದ್ದರು.
ದಂಪತಿಗಳಿಗೆ ಎರಡು ವರ್ಷದ ಗಂಡು ಮಗುವಿದೆ. ಶರತ್ ತಂದೆ, ತಾಯಿ, ಶರತ್ ನ ಸಹೋದರಿ ಶಬರಿ ಸೇರಿ ಪೂಜಾಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಪೂಜಾಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಚಿಕ್ಕಮಗಳೂರಿನ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
