Guarantee Scheme ಪಂಚ ಗ್ಯಾರಂಟಿಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಇದರಿಂದ ಅರ್ಥಿಕವಾಗಿ ಜನರ ಜೀವನ ಮಟ್ಟ ಸುಧಾರಣೆಯಾಗುತ್ತಿದೆ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ಮಧು ತಿಳಿಸಿದರು.
ಶುಕ್ರವಾರ ನಗರದ ತಾಲ್ಲೂಕು ಪಂಚಾಯತ್‌ನಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣ ಮಾಡುವ ಉದ್ದೇಶದಿಂದ ಸರ್ಕಾರವೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ತಾಲ್ಲೂಕು ಮಟ್ಟದ ಪ್ರಾಧಿಕಾರದ ಜೊತೆಗೆ ಗ್ಯಾರಂಟಿಯ ಐದು ಇಲಾಖೆಗಳು ಕೈ ಜೋಡಿಸಿ ಸರ್ಕಾರದ ಯೋಜನೆಯನ್ನು ಜಿಲ್ಲಾದ್ಯಂತ ತಲುಪಿಸಲು ಸಹಕಾರಿಯಾಗುತ್ತಿದೆ ಎಂದರು.
ಸರ್ಕಾರದ ಜನಪರ ಕಾಳಜಿಯಿಂದ ಹಾಗೂ ಅಭಿವೃದ್ದಿ ಉದ್ದೇಶದಿಂದ ಇಂತಹ ಅನೇಕ ಯೋಜನೆಯ ಜಾರಿ ಮಾಡುತ್ತಿದ್ದು, ಈ ನಿಟ್ಟಿನಿಂದ ತಾಲ್ಲೂಕು ಮಟ್ಟದ ಪ್ರಾಧಿಕಾರದ ಸದಸ್ಯರುಗಳು ಕಾರ್ಯಕ್ಷಮತೆಯಿಂದ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದವರೆಗೂ ಮೀಸಲಾಗಿದೆ. ಆದರೆ ದುರ್ಬಲ ಹಾಗೂ ಬಡವರು ಸರಿಯಾದ ಮಾಹಿತಿ ಇಲ್ಲದೆ ಇದನ್ನು ಪಡೆಯಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ. ಆದರಿಂದ ಇಂತಹ ವರ್ಗದ ಜನರಿಗೆ ಆದಷ್ಟು ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನದಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ. ಆಗ ಮಾತ್ರ ಸರ್ಕಾರದ ಉದ್ದೇಶ ಈಡೇರಲಿದೆ ಎಂದು ಹೇಳಿದರು.
ಜುಲೈ-2025 ರ ಮಾಹೆಯಲ್ಲಿ ಜಿಲ್ಲೆಯ 1,5,272 ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಹಣ ಜಮಾ ಮಾಡಲಾಗಿದೆ. ಇನ್ನೂ 2044 ಖಾತೆಗಳು ಐಟಿ/ಜಿಎಸ್‌ಟಿ ಫಲಾನುಭವಿಗಳಾಗಿದ್ದು, ಇದರಲ್ಲಿ 304 ಅರ್ಜಿಗಳನ್ನು ಕಚೇರಿ ಸ್ವೀಕರಿಸಲಾಗಿದೆ. ಹಾಗೂ ಎನ್‌ಪಿಸಿಐ ಯಲ್ಲಿ 300 ಫಲಾನುಭವಿಗಳ ಅರ್ಜಿ ಬಾಕಿ ಇದೆ.
ಅನ್ಯಭಾಗ್ಯ ಯೋಜನೆಗೆ ಸಂಬಂಧಿಸಿದAತೆ ಸರ್ಕಾರವು ಸಚಿವ ಸಂಪುಟದಲ್ಲಿ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದು, ಇನ್ನೂ ಮುಂದೆ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಾಗಿ ಆಹಾರಧಾನ್ಯಗಳ ಕಿಟ್ ನೀಡಲಿದೆ. ಈ ಯೋಜನೆ ಜನವರಿ-2026 ರಿಂದ ಜಾರಿಯಾಗಲಿದೆ. ಹಾಗೂ ಇದರ ನಿರ್ವಹಣೆಗಾಗಿ ಗ್ರಾಮಾಂತರ ಹಾಗೂ ನಗರದಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರನ್ನು ಆಯಾ ವಾರ್ಡ್ ಮಟ್ಟದಲ್ಲಿ ನೇಮಕ ಮಾಡಲಾಗುತ್ತದೆ.
ಸರ್ಕಾರವು ಐಟಿ ಹಾಗೂ ಜಿಎಸ್‌ಟಿ ಹೊಂದಿರುವ ಬಿಪಿಎಲ್ ಪಡಿತರ ಚೀಟಿಯನ್ನು ರದ್ದು ಮಾಡಿ ಅವರನ್ನು ಎಪಿಎಲ್ ಪಡಿತರ ಪಟ್ಟಿಗೆ ಸೇರಿಸಲು ತೀರ್ಮಾನ ಮಾಡಲಾಗಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ತಾಲ್ಲೂಕು ಮಟ್ಟದಲ್ಲಿ 7.44 ಕೋಟಿ ವಿದ್ಯುತ್ ಬಳಕೆ ಮಾಡಲಾಗಿದ್ದು, ಸರ್ಕಾರದಿಂದ 6.40 ಕೋಟಿ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಯುವ ನಿಧಿ ಯೋಜನೆ ಅಡಿಯಲ್ಲಿ ಜುಲೈ-2025 ಮಾಹೆವರೆಗೂ 2,95 ಕೋಟಿ ಹಣವನ್ನು ವಿದ್ಯಾರ್ಹತೆಯನುಸಾರವಾಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
Guarantee Scheme ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 5 ಕೋಟಿ ಮಹಿಳಾ ಫಲಾನುಭವಿಗಳು ಪ್ರಯಾಣ ಮಾಡಿದ್ದು, ಇದರಿಂದ 219 ಕೋಟಿ ಆದಾಯ ಸರ್ಕಾರ ಖಜಾನೆ ಬಂದಿದೆ. ಶಿವಮೊಗ್ಗ ಜಿಲ್ಲೆಗೆ ಎಲೆಕ್ಟ್ರಿಕಲ್ ಬಸ್ ನೀಡಲು ಕರ್ನಾಟಕ ಸರ್ಕಾರವು ಮುಂದಾಗಿದ್ದು, ಅದರಂತೆ ಈಗಾಗಲೇ ಬಸ್ ನಿಲ್ದಾಣದಲ್ಲಿ ಎಲೆಕ್ಟ್ರಿಕಲ್ ಚಾರ್ಚಿಂಗ್ ಪಾಯಿಂಟ್ ಕೂಡ ಅವಳಡಿಸಲಾಗಿದೆ. ಜಿಲ್ಲೆಗೆ ಆದಷ್ಟು ಬೇಗ ಎಲೆಕ್ಟ್ರಿಕಲ್ ಬಸ್ ಬರಲಿದ್ದು, ಇನ್ನೂ ಮುಂದೆ ಜಿಲ್ಲೆಯ ಜನರ ಪ್ರಯಾಣ ಸುಗಮವಾಗುತ್ತದೆ ಎಂದರು.
ಸಭೆಯಲ್ಲಿ ತಾಲ್ಲೂಕು ಸಿಓ ತಾರಾ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
