Sardar Vallabhbhai Patel ಉಕ್ಕಿನ ಮನುಷ್ಯ “ಸರ್ದಾರ್ ವಲ್ಲಭಭಾಯಿ ಪಟೇಲ್” ಅವರ ಜನ್ಮದಿನವಾದ ಇಂದು “ರಾಷ್ಟ್ರೀಯ ಏಕತಾ ದಿನ”ದ ನಿಮಿತ್ತ ಅಪರ ಜಿಲ್ಲಾಧಿಕಾರಿ ಅಭಿಷೇಕ್ ಅವರು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಏಕತೆಯ ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎಲ್ಲಾ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು
