Women and Child Development Department ಮಾದಕ ವಸ್ತುಗಳನ್ನು ಬಳಸುವುದರಿಂದ ಬದುಕು ನಾಶವಾಗಲಿದ್ದು, ಸಾರ್ವಜನಿಕರು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಸಂತೋಷ್ ಹೇಳಿದರು.
ಶಿವಮೊಗ್ಗ ನಗರದ ಬಸವೇಶ್ವರ ಕಾಲೇಜಿನ ಆವರಣದಲ್ಲಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಶಿವಮೊಗ್ಗ, ಜಿಲ್ಲಾ ಕಾನೂನುಗಳ ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನಶಾ ಮುಕ್ತ ಸಮಾಜಕ್ಕಾಗಿ ಶ್ರಮಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಜಾಗೃತಿ ಹಾಗೂ ಪ್ರತಿಜ್ಞಾ ಬೋಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಶಾ ಮುಕ್ತ ಭಾರತ ಅಭಿಯಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಮಾದಕ ವಸ್ತುಗಳು ಬಳಸುವುದರಿಂದ ಬದುಕನ್ನು ಸಂಪೂರ್ಣವಾಗಿ ನಾಶವಾಗುವ ಜತೆಯಲ್ಲಿ ಕುಟುಂಬದ ಮೇಲೆ ತುಂಬಾ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಮಾನವೀಯ ಮೌಲ್ಯಗಳನ್ನು ನಾವು ಉಳಿಸಿ ಬೆಳೆಸಬೇಕು. ನಮ್ಮ ಮಕ್ಕಳಲ್ಲಿ ಬೆಳೆಸುವುದರ ಜೊತೆಗೆ ಮದ್ಯ ಮತ್ತು ಮಾದಕ ವಸ್ತು ಬಳಕೆಯಿಂದ ಅವರನ್ನು ದೂರವಿಡಬೇಕು. ಯುವಜನರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸೋಣ. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ತುಂಬಾ ಅಗತ್ಯ. ಯಾವುದೇ ಆಕರ್ಷಣೆಗೆ ಒಳಗಾಗದೆ ಮತ್ತು ಇಂತಹ ಅಪರಾಧಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ತಿಳಿಸಬೇಕು.
ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಇರಬೇಕು. ವಿದ್ಯಾರ್ಥಿಗಳು ಉತ್ತಮ ಜೀವನ ಕೌಶಲ್ಯಗಳನ್ನು ಸಕಾರಾತ್ಮಕ ಭಾವನೆಗಳನ್ನು ರೂಡಿಸಿಕೊಳ್ಳಬೇಕು. ಇದರಿಂದ ಸದೃಢವಾದ ರಾಷ್ಟ್ರ ನಿರ್ಮಾಣದಲ್ಲಿ ನಿಮ್ಮ ಪಾತ್ರ ತುಂಬಾ ಪ್ರಮುಖವಾಗಿರುತ್ತದೆ ಎಂದರು.
Women and Child Development Department ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಬಸವೇಶ್ವರ ಎಜುಕೇಷನ್ ಅಕಾಡೆಮಿ ಅಧ್ಯಕ್ಷ ಮಹೇಶ್ವರಪ್ಪ, ಕಾರ್ಯದರ್ಶಿ ಎಸ್.ಪಿ.ಜಗನ್ನಾಥ್, ನಿರ್ದೇಶಕ ಆನಂದ್ ವಾಲಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
