Wednesday, February 4, 2026
Wednesday, February 4, 2026

ನವೆಂಬರ್ 16. ನಿವೃತ್ತ ನೌಕರರಿಗೆ ಕ್ರೀಡೆ & ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ

Date:

ಕನ್ನಡ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಸಂಘದ ಸದಸ್ಯರುಗಳಿಗೆ ನ.16 ರಂದು ಬೆಳಗ್ಗೆ 10 ಗಂಟೆಗೆ ಸಂಘದ ಆವರಣದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಮಹಿಳೆಯರು ಹಾಗೂ ಪರುಷರಿಗೆ ಅನ್ವಯವಾಗುವಂತೆ 1 ನೇ ವಿಭಾಗದಲ್ಲಿ 70 ವರ್ಷದೊಳಗಿನ ಸದಸ್ಯರಿಗೆ ಹಾಗೂ 2 ನೇ ವಿಭಾಗದಲ್ಲಿ 70 ವರ್ಷ ಮೇಲ್ಪಟ್ಟವರಿಗಾಗಿ ಏರ್ಪಡಿಸಲಾಗಿದ್ದು, ಮಹಿಳೆಯರಿಗೆ ಚಮಚದಲ್ಲಿ ನಿಂಬೆಹಣ್ಣಿನ ನಡಿಗೆ, ಬೇಬಿ ಪಾಸ್ ರಿಲೇ ಹಾಗೂ ಪುರುಷರಿಗೆ ಗುಂಡು ಎಸೆತ, ಬ್ಲಾಸ್ಟ್ ಇನ್‌ ದ ಸಿಟಿ ಕ್ರೀಡೆಯನ್ನು ಆಯೋಜಿಸಲಾಗಿದೆ.
ಸಂಜೆ 5 ಗಂಟೆಗೆ ಜನಪದ ಗೀತೆ ಹಾಗೂ ಭಾವಗೀತೆ ಗಾಯನದ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧಾರ್ಥಿಗಳು ಯಾವುದಾದರೂ ಎರಡು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸತಕ್ಕದ್ದು. ಸ್ಪರ್ಧೆಯಲ್ಲಿ ಭಾಗವಹಿಸುವವರು ಸಂಘದ ಸದಸ್ಯತ್ವದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆಸಕ್ತರು ನ.16 ರ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿ ವೇಳೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಜಿ ಸ ನಿ ನೌ ಸಂಘದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...