Kannnada Rajyotsava ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಕಂಪನಿಯ ಆವರಣದೊಳಗಿರುವ ಫ್ಯಾಕ್ಟರಿ ಮೀಟಿಂಗ್ ಹಾಲ್‌ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕ (ವರ್ಕ್ಸ್) ಶ್ರೀ ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಶ್ರೀ ಎಲ್. ಪ್ರವೀಣ್ ಕುಮಾರ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಜೆ. ಜಗದೀಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಆರ್. ಹರೀಶ್‌ರವರು ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕನಾಟಕ ರಾಜ್ಯ ಮತ್ತು ಸಾಧಕರ ಸಾಧನೆಯನ್ನು ಸಂಕ್ಷಿಪ್ತವಾಗಿ ವಿವರಿಸಲಾಯಿತು. ಕನ್ನಡ ನಾಡು ನುಡಿಯ ಕುರಿತಾದ ರಸಪ್ರಶ್ನೆ ಕಾರ್ಯಕ್ರಮ, ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು ನೆರೆದ ಸಭೀಕರನ್ನುದ್ದೇಶಿ ಮಾತನಾಡಿ, ಕನ್ನಡ ನಾಡು, ನುಡಿ ಸಂಸ್ಕೃತಿಯಬಗ್ಗೆ ಪ್ರಶಂಸಿಸಿ ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಳಗೆ ತಿಳಿಸಿದ ಕಲಾವಿದರು ವಿವಿಧ ಪ್ರಾಕಾರದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸಭೀಕರ ಮನಸೂರೆಗೊಂಡರು.
Kannnada Rajyotsava ಈ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳಾದ ಶ್ರೀ ಮುತ್ತಣ್ಣ ಸುಬ್ಬರಾವ್, ಮಹಾಪ್ರಬಂಧಕರು (ಪರಿಸರ ನಿರ್ವಹಣಾ ಇಲಾಖೆ), ಶ್ರೀಮತಿ ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು ಮತ್ತು ಲೆಕ್ಖ), ಶ್ರೀ ರಘುನಾಥ್ ಅಷ್ಟಪುತ್ರೆ, ಮಹಾಪ್ರಬಂಧಕರು (ವಿಜಿಲೆನ್ಸ್), ವಿಐಎಸ್‌ಎಲ್ ಕಾರ್ಮಿಕ ಸಂಘದ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾದಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನು ವಿಐಎಸ್‌ಎಲ್‌ನ ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿತ್ತು.
