Thursday, March 19, 2026
Thursday, March 19, 2026

Mango Leaf Holidays ನಿದಿಗೆಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Date:

Mango Leaf Holidays ಶಿವಮೊಗ್ಗ ನಗರದ ಹೊರಭಾಗದಲ್ಲಿರುವ ನಿಧಿಗೆ ಗ್ರಾಮದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆ ವತಿಯಿಂದ 105 ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಶೂಟ್‌ಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವ ಹಾಗೂ ದೈಹಿಕ ಚಟುವಟಿಕೆಗಳ ಬಗ್ಗೆ ಸ್ಪೂರ್ತಿ ಮೂಡಿಸುವ ಉದ್ದೇಶದಿಂದ ಈ ಸಾಮಾಜಿಕ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್, ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್ ಕೆ., ವೆಂಕಟಾಚಲ ಗೌಡ್ರು, ನಾಗರಾಜ್ ಎಂ.ಜಿ., ಮಂಜುನಾಥ್ ಗೌಡ್ರು, ಆನಂದ್ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್ ಅವರು ಹೇಳಿದರು —

Mango Leaf Holidays “ನಮ್ಮ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರ ನೀಡುವುದೇ ಧ್ಯೇಯ. ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮೆರೆದಾಡಬೇಕು ಎಂಬ ಆಶಯದಿಂದ ಈ ಟ್ರ್ಯಾಕ್ ಶೂಟ್ ವಿತರಣೆ ಕಾರ್ಯ ಕೈಗೊಂಡಿದ್ದೇವೆ,” ಎಂದು ಹೇಳಿದರು…….

ಕಾರ್ಯಕ್ರಮದ ಅಂತ್ಯದಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...