CM Siddharamaiah ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಹಿಂದಿನ ಸರ್ಕಾರ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೆ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಎರಡು ವರ್ಷದ ಪ್ರಶಸ್ತಿಗಳನ್ನು ಈಗ ನೀಡಿದ್ದೇವೆ. ಕೆಲವೇ ದಿನಗಳಲ್ಲಿ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
CM Siddharamaiah ಆಯಾ ವರ್ಷದ ಪ್ರಶಸ್ತಿ ವಿಜೇತ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ವಿತರಣೆ ಸೂಕ್ತ- ಸಿದ್ಧರಾಮಯ್ಯ
Date:
