CM Siddharamaiah ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ ಬೀದಿಗಿಳಿದಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಗಮನಿಸಿದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.
ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ.
ಅದರಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
CM Siddharamaiah ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.
