Rotary Club Shimoga ಸೇವಾ ಮನೋಭಾವ ಬೆಳೆಸುವಲ್ಲಿ ರೋಟರಿ ಸಂಸ್ಥೆಯು ಸಮಾಜಕ್ಕೆ ಪ್ರೇರಣೆಯಾಗಿದೆ. ಸೇವೆ ಎಂಬುದು ಯಾವುದೇ ಅಪೇಕ್ಷೆ ಇಲ್ಲದೆ ಅಗತ್ಯ ಇರುವವರಿಗೆ ಸಹಕಾರ ನೀಡುವುದಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರದ ಸರ್ಕಾರಿ ಪ್ರೌಢಶಾಲೆಗೆ ಉಚಿತವಾಗಿ ಕಲರ್ ಪ್ರಿಂಟರ್ ಕೊಡುಗೆ ನೀಡಿ ಮಾತನಾಡಿ, ಸೇವಾ ಸಂಸ್ಥೆಗಳಲ್ಲಿ ರೋಟರಿ ಸಂಸ್ಥೆ ವಿಶ್ವದಲ್ಲಿ ಅತ್ಯಂತ ದೊಡ್ಡ ಸಂಸ್ಥೆಯಾಗಿದೆ. ಈ ಸಂಸ್ಥೆಯಲ್ಲಿರುವ ಎಲ್ಲ ಸದಸ್ಯರು ದಾನಿಗಳೇ ಎಂದು ತಿಳಿಸಿದರು.
ಜಿಲ್ಲಾ ಕಾರ್ಯಕ್ರಮ ಶಿಕ್ಷಣದ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಗ್ರಾಮಾಂತರ ಪ್ರದೇಶದಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಸಂಸ್ಥೆಯ ಸಹಕಾರವನ್ನು ನೀಡುತ್ತ ಬರುತ್ತಿದ್ದೇವೆ. ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಹಗಲಿರುಳು ಶ್ರಮಿಸುತ್ತಿದೆ. ಈ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲೆಯ ಮುಖ್ಯ ಉಪಾಧ್ಯಾಯಿನಿ ಶಕುಂತಲಾ ಮಾತನಾಡಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಿಸ್ವಾರ್ಥ ಸೇವೆಯ ಬಗ್ಗೆ ಪ್ರಶಂಶಿಸಿದರು. ಈ ಸಂಸ್ಥೆಯು 16 ವರ್ಷದಿಂದ ಶಾಲೆಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಅವರ ಸಂಸ್ಥೆಗೆ ನಮ್ಮ ಶಾಲೆಯು ಚಿರಋಣಿಯಾಗಿದೆ ಎಂದು ಹೇಳಿದರು.
Rotary Club Shimoga ಕಾರ್ಯಕ್ರಮದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಸಂತೋಷ್, ಗೀತಾ ಜಗದೀಶ್, ಬಲರಾಮ್, ಈಶ್ವರ್, ಮೋಹನ್, ಕಾರ್ಯದರ್ಶಿ ಜಯಶೀಲ್ ಶೆಟ್ಟಿ, ಆನ್ಸ್ ಅಧ್ಯಕ್ಷೆ ರಾಜಶ್ರೀ ಬಸವರಾಜ್, ಜಗದೀಶ್, ಮಥುರಾ ಧನಂಜಯ್ ಮತ್ತು ಶಾಲಾ ಶಿಕ್ಷಕ ರಮೇಶ್ ಮತ್ತು ಸಿಬ್ಬಂದಿ ಹಾಗೂ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
