Monday, May 4, 2026
Monday, May 4, 2026

Women and Child Development Department ಜಿಲ್ಲೆಯಲ್ಲಿ”ಅಕ್ಕ ಪಡೆ ತಂಡ” ಕ್ಕೆ ಸೇವಾ ಗುತ್ತಿಗೆ ಆಧಾರದ ಮೇಲೆ 5 ಮಹಿಳಾ ಅಭ್ಯರ್ಥಿಗಳ ನೇಮಕಾತಿ ಪ್ರಕಟಣೆ

Date:

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು, ದೈಹಿಕ ಸದೃಢತೆ ಮತ್ತು ಸ್ಥಳೀಯ ನಿವಾಸಿ ಯಾಗಿರಬೇಕು. ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ 2 ಪಾಳಿ ಆಧಾರದಲ್ಲಿ ಕೆಲಸ ನಿರ್ವಹಿಸಲು ಬದ್ಧರಿರಬೇಕು.

Women and Child Development Department ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ ಶಿವಮೊಗ್ಗ ಇವರಿಗೆ ದಿನಾಂಕ:13.11.2025 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-295514 ಅಥವಾ ddwcdshimoga@gmail.com ಸಂಪರ್ಕಿಸಬಹುದಾಗಿದೆ ಎಂದು ಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ‌ ಬಣಕಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...