ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ಸಂಬಂಧಪಟ್ಟ ರೈತ ಮುಖಂಡರುಗಳೊಂದಿಗೆ ಸಭೆ ನಡೆಯಿತು.
ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಟನ್ ಗೆ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ ಯಾಗಿ 50 ರೂ. ಕೊಡಿಸುವ ಭರವಸೆಯೊಂದಿಗೆ ಹೋರಾಟ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದೆ.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೋರಲಾಗಿದೆ. ರೈತರು ಪ್ರತಿಭಟನೆ ಹಿಂಪಡೆದು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
CM Siddharamaiah ಈ ಸಭೆಯಲ್ಲಿ, ಸಚಿವರಾದ ಎಚ್.ಕೆ ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ರೈ ಮುಖಂಡರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
