CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ “ಸಂತ ಶ್ರೇಷ್ಠ ಕನಕದಾಸ” ಜಯಂತಿಯನ್ನು ಉದ್ಘಾಟಿಸಿ, ಕನಕಶ್ರೀ ಪ್ರಶಸ್ತಿ ಪುರಸ್ಕಾರ ಮಾಡಿದರು.
ಕಾಗಿನೆಲೆ ಗುರುಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಜಯಂತಿಯಲ್ಲಿ ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನ ಕನಕಶ್ರೀ ಪ್ರಶಸ್ತಿಯನ್ನು ಚಂದ್ರಕಾಂತ ಬಿಜ್ಜರಗಿ ಅವರಿಗೆ, ಕನಕ ಗೌರವ ಪ್ರಶಸ್ತಿಯನ್ನು- ಡಾ.ಅಕ್ಕಮಹಾದೇವಿ ಹಾಗೂ ಕನಕ ಯುವ ಪುರಸ್ಕಾರವನ್ನು ಡಾ.ರವೀಂದ್ರ ಲಂಜವಾಡಕರ್ ಅವರಿಗೆ ನೀಡಿ ಗೌರವಿಸಿದರು.
CM Siddharamaiah ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪಕಟ್ಟಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ, ಇಲಾಖೆ ಕಾರ್ಯದರ್ಶಿ ಕುಮಾರ್, ನಿರ್ದೇಶಕಿ ಕೆ.ಎಂ.ಗಾಯಿತ್ರಿ ಹಾಗೂ ಇನ್ನಿತರರು ಅಧಿಕಾರಿಗಳು ಉಪಸ್ಥಿತರಿದ್ದರು.
