Saturday, December 6, 2025
Saturday, December 6, 2025

Children’s Day ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಜಿಲ್ಲೆಯಿಂದ ಆಯ್ಕೆಯಾದ ಪ್ರತಿಭಾಶಾಲಿ ಮಕ್ಕಳಿಗೆ ಸ್ಮರಣಿಕೆಗಳ ವಿತರಣೆ

Date:

Children’s Day ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಜಿಲ್ಲಾ ಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡುವ ಸಲುವಾಗಿ ಗುರುವಾರ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳಿಗೆ ವಿವಿಧ ಪಠ್ಯೇತರ ಚಟುವಟಿಕೆಗಳಾದ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸAತೋಷ್ ಸ್ಮರಣಿಕೆ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಸೃಜನಾತ್ಮ ಕಲೆ (ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ) ಸ್ಪರ್ಧೆಯಲ್ಲಿ ಮೇರಿ ಇಮ್ಯಾಕ್ಯುಲೇಟ್ ಶಾಲೆಯ ಖುಷಿ.ಆರ್ ಪ್ರಥಮ, ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್‌ನ ಆರ್ನಾ.ಎಸ್ ದ್ವಿತೀಯ, ಬಾಲಕರ ಬಾಲ ಮಂದಿರದ ಸಿದ್ದಾರ್ಥ್ ತೃತೀಯ ಸ್ಥಾನ ಪಡೆದಿದ್ದಾರೆ.
ಸೃಜನಾತ್ಮ ಪ್ರದರ್ಶನ ಕಲೆ ಸ್ಪರ್ಧೆಯಲ್ಲಿ ಅನನ್ಯ ವಿದ್ಯಾಪೀಠದ ಗ್ಲೋರಿಯಾ ರಿಜಾರಿಯೋ ಪ್ರಥಮ, ಹೊಸನಗರ ವಿದ್ಯಾಭಾರತಿ ಶಾಲೆಯ ಆರ್ವಿ ಎಲ್.ಹೆಚ್ ದ್ವಿತೀಯ, ಗಾಜನೂರಿನ ಕರ್ನಾಟಕ ಪ್ರೌಢಶಾಲೆಯ ಅನುಷಾ ತೃತೀಯ ಸ್ಥಾನ ಪಡೆದಿದ್ದಾರೆ.
ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಗಾಜನೂರಿನ ಕರ್ನಾಟಕ ಪ್ರೌಢಶಾಲೆಯ ರಶ್ಮಿತಾ.ಎಸ್ ಪ್ರಥಮ, ಗಾಡಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಯಶವಂತ ವೈ.ಆರ್ ದ್ವಿತೀಯ, ಗೋಪಾಳ ಹಿರಿಯ ಪ್ರಾಥಮಿಕ ಶಾಲೆಯ ಪೂರ್ಣಿಮಾ.ಆರ್ ತೃತೀಯ ಸ್ಥಾನ ಪಡೆದಿದ್ದಾರೆ.
Children’s Day ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಯಲ್ಲಿ ಶಿವಮೊಗ್ಗ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಾನಿಧ್ಯ ಪ್ರಥಮ, ರಾಮಯ್ಯ ಸರ್ವೋದಯ ಪ್ರೌಢಶಾಲೆಯ ಲಾವಣ್ಯ.ಸಿ.ಆರ್, ಗೋಪಾಳ ಹಿರಿಯ ಪ್ರಾಥಮಿಕ ಶಾಲೆಯ ಮೊಹಮದ್ ಇಬ್ರಾಹಿಂ ತೃತೀಯ ಸ್ಥಾನ ಪಡೆದಿದ್ದು, ಪ್ರಥಮ ಮತ್ತು ದ್ವಿತೀಯ ಶ್ರೇಯಾಂಕದಲ್ಲಿ ವಿಜೇತರಾದ ಮಕ್ಕಳನ್ನು ರಾಜ್ಯಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...