Rotary Club Shimoga ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಅತ್ಯಗತ್ಯವಾಗಿದ್ದು, ಮಗುವಿನ ಬೆಳವಣಿಗೆಗೂ ಪೌಷ್ಟಿಕಾಂಶ ಅತಿ ಮುಖ್ಯವಾಗಿ ಸಹಕಾರಿಯಾಗುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಹೊಸಮನೆ ಬಡಾವಣೆಯಲ್ಲಿರುವ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೌಷ್ಟಿಕವಾದ ಆಹಾರವನ್ನು ತೆಗೆದುಕೊಳ್ಳುವುದರ ಜೊತೆಗೆ ಸ್ವಚ್ಛತೆ ಹಾಗೂ ವ್ಯಾಯಾಮ ಅತ್ಯಂತ ಅಗತ್ಯವಾಗಿರುತ್ತದೆ ಎಂದು ತಿಳಿಸಿದರು.
ಗರ್ಭಿಣಿಯರು ಪೌಷ್ಟಿಕಾಂಶವಾದ ಆಹಾರವನ್ನು ತೆಗೆದುಕೊಳ್ಳುವುದರಿಂದ ಎದೆಹಾಲಿನಲ್ಲಿ ಕೊರತೆ ಇರುವುದಿಲ್ಲ. ತಾಯಿಯ ಮಡಿಲು ಎಂಬ ಕಾರ್ಯಕ್ರಮದ ಅಡಿಯಲ್ಲಿ ರೋಟರಿ ಸಂಸ್ಥೆಯು ಹಲವಾರು ಕಾರ್ಯಕ್ರಮಗಳನ್ನು ಮತ್ತು ಜಾಗೃತಿ ಶಿಬಿರಗಳನ್ನು ಆಯೋಜನೆ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ರೋಟರಿ ಸಂಸ್ಥೆಯು ಅನೇಕ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಆರೋಗ್ಯಕರ ಸಮಾಜದ ನಿರ್ಮಾಣಕ್ಕಾಗಿ ನಿಸ್ವಾರ್ಥವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು.
Rotary Club Shimoga ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲಶೆಟ್ಟಿ, ಬಲರಾಮ್, ಧರ್ಮೇಂದ್ರ ಸಿಂಗ್, ಈಶ್ವರ್ ಬಿವಿ, ಮೋಹನ್, ರಾಜೇಶ್ವರಿ ಸಿಂಗ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರವಿ ಮತ್ತು ಅಂಗನವಾಡಿಯ ಕಾರ್ಯಕರ್ತೆ ರೇಣುಕಾ ಮತ್ತು ಗರ್ಭಿಣಿಯರು ಉಪಸ್ಥಿತರಿದ್ದರು.
