S N Channabasappa ಇಂದು ಬೆಳಿಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳು ಹಾಗೂ ವರ್ತಕರ ಸಮಸ್ಯೆಗಳನ್ನು ಆಲಿಸಿದರು. ಪ್ರತಿ ಮಂಗಳವಾರ ನಡೆಯುವ ಸಂತೆ ಸಮಯದಲ್ಲಿ ಉಂಟಾಗುತ್ತಿದ್ದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿದರು.
S N Channabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸ್ಥಳೀಯರು ಮತ್ತು ವರ್ತಕರ ಮಧ್ಯೆ ಉಂಟಾಗಿದ್ದ ಗೊಂದಲಗಳನ್ನು ಶಾಂತಿಯುತವಾಗಿ ಪರಿಹರಿಸುವ ಕ್ರಮ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಕಾರದೊಂದಿಗೆ ಗಾಂಧಿ ಬಜಾರ್ ಪ್ರದೇಶವನ್ನು ಇನ್ನಷ್ಟು ಸುಗಮ, ಸ್ವಚ್ಛ ಮತ್ತು ವ್ಯಾಪಾರ ಸ್ನೇಹಿ ವಾತಾವರಣವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
