Shivamogga ZP ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1996(ಜಿಲ್ಲಾ ಯೋಜನಾ ಸಮಿತಿಯ ಸದಸ್ಯರುಗಳ ಚುನಾವಣೆ) ನಿಯಮಗಳು 1996 ರ ನಿಯಮ 8 ರ ಪ್ರಕಾರ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮತಕ್ಷೇತ್ರದಿಂದ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಬೇಕಿದ್ದು. ಜಿ.ಪಂ.ಸಿಇಓ ಮತ್ತು ಜಿಲ್ಲಾ ಯೋಜನಾ ಸಮಿತಿ ಚುನಾವಣೆಗಳ ಪದನಿಮಿತ್ತ ಚುನಾವಣಾಧಿಕಾರಿ ಹೇಮಂತ್ ಎನ್ ಈ ಕೆಳಗಿನಂತೆ ಕಾರ್ಯಕ್ರಮ ವೇಳಾಪಟ್ಟಿಯನ್ನು ನಿಗದಿಪಡಿಸಿರುತ್ತಾರೆ.
ದಿ: 13-11-2025 ರಿಂದ 24-11-2025 ರ ಬೆಳಿಗ್ಗೆ 10 ರಿಂದ ಅಪರಾಹ್ನ 3 ಗಂಟೆವರೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಕಚೇರಿಯಲ್ಲಿ ನಾಮನಿರ್ದೇಶನಗಳನ್ನು ಸಲ್ಲಿಸುವುದು. ದಿ: 26-11-2025 ರ ಬೆಳಿಗ್ಗೆ 11 ಗಂಟೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಕಚೇರಿಯಲ್ಲಿ ನಾಮಪತ್ರಗಳ ಪರಿಶೀಲನೆ. ದಿ: 29-11-2025 ರ ಬೆಳಿಗ್ಗೆ 10 ರಿಂದ ಅಪರಾಹ್ನ 3 ರವರೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ದಿ: 05-12-25 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾನ ನಡೆಯಲಿದ್ದು ದಿ: 05-12-2025 ರ ಸಂಜೆ 5 ಗಂಟೆಯಿAದ ಜಿ.ಪಂ ಸಭಾಂಗಣದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ದಿ: 06-12-2025 ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ.
Shivamogga ZP ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಗಳಿAದ ಒಟ್ಟು 06 ಜನಪ್ರತಿನಿಧಿಗಳನ್ನು ಚುನಾಯಿಸಲಾಗುತ್ತಿದ್ದು, 50 ಮತದಾರರು ಇದ್ದಾರೆ ಎಂದು ಜಿಲ್ಲಾ ಯೋಜನಾ ಸಮಿತಿ ಚುನಾವಣೆ ಚುನಾವಣಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga ZP ಶಿವಮೊಗ್ಗ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರುಗಳ ಆಯ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಣೆ.
Date:
