Saturday, December 6, 2025
Saturday, December 6, 2025

CM Siddaramaiah ಅರಣ್ಯ ಪ್ರದೇಶದಿಂದ ಹೊರ ಸಂಚರಿಸುತ್ತಿರುವ ಹುಲಿಗಳನ್ನ ಡ್ರೋನ್ ನೆರವಿನಿಂದ ತಕ್ಷಣ ಹಿಡಿಯಿರಿ- ಸೀಎಂ ಸಿದ್ಧರಾಮಯ್ಯ

Date:

CM Siddaramaiah ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಸೂಚನೆಗಳು ಹೀಗಿವೆ.

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ. ಇದಕ್ಕಾಗಿ ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು.

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋನ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಬೇಕು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು. ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತು ಯಾವ ಸ್ವರೂಪದ ಸಂಘರ್ಷ ಇದೆ ಎಂದು ಪಟ್ಟಿ ಮಾಡಬೇಕು.

ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ ಮಾಡಬೇಕು. ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ ಮಾಡತಕ್ಕದ್ದು.

CM Siddaramaiah ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕು. ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ, ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳಬೇಕು. ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು. ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಬೇಕು.

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ ಮಾಡುವುದು. ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯಬೇಕು. ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸತಕ್ಕದ್ದು. ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6,395 ಇದ್ದು, ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1,879 ಚಿರತೆಗಳಿದ್ದು, ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.

ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ
ಲಾಂಟಾನ ಕಳೆಯ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳಿಗೆ ಮೇವಿಗೆ ಕೊರತೆ ಉಂಟಾಗುತ್ತದೆ.
ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...