Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ ಪರಿಪೂರ್ಣರನ್ನಾಗಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ತಂತ್ರಜ್ಞಾನ ಬದಲಾದ ಹಾಗೆ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣಿಸುತ್ತಿದೆ. ಮಾನವೀಯ ಮೌಲ್ಯಗಳು ಕೊರತೆ ಇದೆ. ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಹಾಗೂ ಜೀವನ ಕೌಶಲ್ಯಗಳ ಬಗ್ಗೆ ಅರಿತುಕೊಂಡು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಹೆಣ್ಣು ಮಕ್ಕಳು ದೌರ್ಜನ್ಯ ಹಾಗೂ ಬೇರೆ ಬೇರೆ ಕಾರಣಗಳಿಗೆ ಆತ್ಮಹತ್ಯೆಗೆ ಒಳಗುತ್ತಿದ್ದಾರೆ. ಆದ್ದರಿಂದ ಯಾವುದೇ ಆಕರ್ಷಣೆಗೆ ಒಳಗಾಗದೆ ಗುಡ್ ಟಚ್ ಮತ್ತು ಬ್ಯಾಟ್ ಟಚ್ ಬಗ್ಗೆ ತಿಳಿದುಕೊಂಡು ಪರಸ್ಪರರಲ್ಲಿ ಒಡನಾಟ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಯ ಜೀವನ ಬಂಗಾರದ ಜೀವನ. ಈ ಹಂತದಲ್ಲಿ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಹಾಗೂ ನೈತಿಕ ಶಿಕ್ಷಣವನ್ನು ಮೂಡಿಸಬೇಕು ಎಂದು ತಿಳಿಸಿದರು.
Children’s Day ಶಿವಮೊಗ್ಗ ಐಎಂಎ ಶಾಖೆಯ ಮಾಜಿ ಅಧ್ಯಕ್ಷ ಡಾ. ಅರುಣ್ ಮಾತನಾಡಿ, ಮಕ್ಕಳು ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು. ನಿಯಮಿತವಾದ ವ್ಯಾಯಾಮ, ಪೌಷ್ಟಿಕಾಂಶ ಸೇವನೆ ಮತ್ತು ಸಕಾರಾತ್ಮಕ ಭಾವನೆಯಿಂದ ಶಿಕ್ಷಣದ ಜೊತೆಗೆ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ನೆಪ್ಚೂನ್ ಕಿಶೋರ್ ಕುಮಾರ್ ಮಾತನಾಡಿ, ಮಕ್ಕಳು ಸಮಾಜದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಬಾಲ್ಯದಲ್ಲಿ ಒಳ್ಳೆಯ ಶಿಕ್ಷಣ ಹಾಗೂ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಮಕ್ಕಳು ಪರಿಪೂರ್ಣವಾದ ವ್ಯಕ್ತಿತ್ವವನ್ನು ಹೊಂದುತ್ತಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಂದ ಮಕ್ಕಳ ಗೀತೆಗಳು ಹಾಗೂ ಕೇಕ್ ಕಟ್ ಮಾಡುವುದರ ಮುಖಾಂತರ ಸಿಹಿ ಹಂಚಿ ಸಂಭ್ರಮಿಸಿದರು. ಡಾ. ಅವಿನಾಶ್ ಅವರು ಎಲ್ಲಾ ಮಕ್ಕಳಿಗೆ ಕೇಕ್ ವಿತರಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಸತೀಶ್ ಚಂದ್ರ, ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ಮಾಜಿ ಅಧ್ಯಕ್ಷ ಅರುಣ್ ದೀಕ್ಷಿತ್ ಹಾಗೂ ರೋಟರಿ ಸದಸ್ಯರು ಇನ್ನರ್‌ವ್ಹೀಲ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್
Date:
