Karnataka State Human Rights Commission ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿದೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2025 ನೇ ನವೆಂಬರ್ 18 ರಿಂದ 20 ರವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.
ಈ ಸಂದರ್ಭದಲ್ಲಿ ಸದರಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾಯ ಜಿಲ್ಲೆಗಳಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯಾಯ ಜಿಲ್ಲೆಗಳಲ್ಲಿಯೇ ನಿಗದಿತ ದಿನಾಂಕಗಳಂದು ಸಾರ್ವಜನಿಕರಿಂದ ದೂರುಗಳು ಮತ್ತು ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ.
Karnataka State Human Rights Commission ಸಾರ್ವಜನಿಕರು ಆಯಾ ಜಿಲ್ಲೆಗಳಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದಾಗಿದೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ (ಪ) ಎ. ದಿನೇಶ್ ಸಂಪತ್ ರಾಜ್ ಅವರು ತಿಳಿಸಿದ್ದಾರೆ.
