Thursday, March 19, 2026
Thursday, March 19, 2026

Agricultural University ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಬೇಕು.ಕೃಷಿಯಲ್ಲಿ ಆಂದೋಲನವಾಗಬೇಕು- ಸಚಿವ ಎನ್.ಚಲುವರಾಯ ಸ್ವಾಮಿ

Date:

Agricultural University ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ,
ಹೊಸ ತಳಿಗಳು, ಆಧುನಿಕ ತಾಂತ್ರಿಕತೆಯಿಂದ ಕೃಷಿ ಕ್ಷೇತ್ರವು ಸಮೃದ್ಧಿಯಿಂದ ಕೂಡಿದೆ. ಇದರಿಂದ ಸಾರ್ವಜನಿಕರು ಸಹ ಕೃಷಿಯಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ತಿಳಿಸಿದರು

ಇಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ ಮೇಳ – 2025”ರ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ನಗರದ ಜನರು, ಐಟಿಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಸಹ ಕೃಷಿಯಲ್ಲಿ ಆಸಕ್ತಿವಹಿಸುತ್ತಿದ್ದಾರೆ.ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಾಗಬೇಕು. ಕೃಷಿಯಲ್ಲಿ ಆಂದೋಲನವಾಗಬೇಕು ಎಂದು ಹೇಳಿದರು.

ಸಾಲುಮರದ ತಿಮ್ಮಕ್ಕ ಅವರು 5000 ಕ್ಕೂ ಹೆಚ್ಚು ಗಿಡ ನೆಟ್ಟಿದ್ದಾರೆ. ಪರಿಸರವನ್ನು ಸಂರಕ್ಷಿಸಿದ ಮಹಿಳೆಯನ್ನು ಸದಾ ಸ್ಮರಿಸಬೇಕು.
ಕೃಷಿ ಮೇಳದಲ್ಲಿ 750 ಕ್ಕೂ ಹೆಚ್ಚು ಮಳಿಗೆಗಳಿದ್ದು ಲಕ್ಷಾಂತರ ಜನರಿಗೆ ಅನುಕೂಲವಾಗಿದೆ ಎಂದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಬೆಂಗಳೂರಿನ ಕೃಷಿ ಮೇಳದಲ್ಲಿ ಜಾತ್ರೆಯ ರೀತಿಯಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಇದನ್ನು ಆಯೋಜಿಸಿದ ಕೃಷಿ ಸಚಿವರಿಗೆ ಹಾಗೂ ವಿಶ್ವವಿದ್ಯಾನಿಲಯದ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಕೃಷಿ ಮೇಳವು ಮಾದರಿ ಕೃಷಿಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಮುಖಾಂತರ ಬೇರೆ ರೈತರಿಗೆ ಸ್ಫೂರ್ತಿ ಮೂಡಿಸುವ ಪ್ರಯತ್ನ ವಾಗಿದೆ ಎಂದರು.

ಇಂದು ದೇಸೀಯ ತಳಿಗಳು ಮತ್ತು ಕೃಷಿ ಪದ್ದತಿಗಳು ಕುರಿತು ರೈತರಿಂದ ರೈತರಿಗಾಗಿ ಚರ್ಚಾ ಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಡಾ. ಎಂ. ಹೆಚ್. ಮರೀಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧನ ಪ್ರಶಸ್ತಿ, ಡಾ.ಎಂ.ಹೆಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Agricultural University ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಎಸ್.ವಿ.ಸುರೇಶ, ಕುಲಸಚಿವರಾದ ಡಾ.ಕೆ.ಸಿ.ನಾರಾಯಣಸ್ವಾಮಿ ಹಾಗೂ ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳು, ರೈತ ಪ್ರಶಸ್ತಿ ಪುರಸ್ಕೃತರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...