Sri Adichunchangiri Education Trust ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಹೊರವಲಯದ ಗುರುಪುರದ ಪುರಾತನ ಕಾಲದ”ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಆಯೋಜಿಸಲಾಗಿದ್ದ ಪಂಚಾಮೃತ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾರ್ಯಕ್ರಮದಲ್ಲಿ ಪೂಜ್ಯರು, ಪತ್ರಕರ್ತರಾದ ಸಂತೋಷ್ ಕಾಚಿನಕಟ್ಟೆ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.
Sri Adichunchangiri Education Trust ಈ ಪೂಜಾ ಕಾರ್ಯಕ್ರಮದಲ್ಲಿ ಗಣ್ಯರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಪೋಷಕರು,ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.
