ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನ.25 ರಿಂದ 27 ರವರೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನ, ಅಶೋಕನಗರ ಇಲ್ಲಿ ವಾರ್ಷಿಕ ಕ್ರೀಡಾಕೂಟ – 2025 ನ್ನು ಆಯೋಜಿಸಲಾಗಿದೆ.
ನ.25 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ನ.27 ರ ಸಂಜೆ 4 ಗಂಟೆಗೆ ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಬಿ.ಆರ್.ರವಿಕಾಂತೇಗೌಡ ಇವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಎ.ಜಿ.ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಎಸ್ ರಮೇಶ್ ಕುಮಾರ್ ಪಾಲ್ಗೊಳ್ಳುವರು.
ನವೆಂಬರ್ 25 ರಿಂದ 27. ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ
Date:
