ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಮೊಗ್ಗ ಮತ್ತು ಕುಂಸಿ ರೈಲು ನಿಲ್ದಾಣಗಳ ಮಧ್ಯೆ ಬರುವ ರೈಲ್ವೆ ಕಿ.ಮೀ.ನಂ.-64/800-900ರಲ್ಲಿ ದಿ: 20/04/2025 ರಂದು ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವವು ಪತ್ತೆಯಾಗಿದ್ದು, ವ್ಯಕ್ತಿಯ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತ ವ್ಯಕ್ತಿ ಚಹರೆ 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಡುಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಹಿಂದು ಮತಸ್ಥನಂತೆ ಕಂಡು ಬರುವ ಈತನ ಮೈಮೇಲೆ ಕಡು ಗುಲಾಬಿ ಬಣ್ಣದ ಶರ್ಟ್ ಮತ್ತು ಕಪ್ಪು-ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾರೆ.
ಈ ಚಹರೆಯುಳ್ಳ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಎಸ್.ಐ.ರವರನ್ನು ಖುದ್ದಾಗಿ ಅಥವಾ ದೂ.ಸಂ.: 08182-222974/ 948082124 ನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ತಿಳಿಸಿದೆ.
ಅಪರಚಿತ ಶವಪತ್ತೆ.ಶಿವಮೊಗ್ಗ ರೈಲ್ವೆ ಪೊಲೀಸ್ ಮಾಹಿತಿ ಪ್ರಕಟಣೆ
Date:
