Thursday, March 19, 2026
Thursday, March 19, 2026

CM Siddharamaiah ಮೌಢ್ಯ ಹೋಗಲಾಡಿಸಲು ಚಾಮರಾಜನಗರಕ್ಕೆ ಭೇಟಿ, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲೂ ಭದ್ರವಾಗಿರುತ್ತದೆ- ಸಿದ್ಧರಾಮಯ್ಯ

Date:

CM Siddharamaiah ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ನವೆಂಬರ್ ಕ್ರಾಂತಿ ಎನ್ನುವುದು ಮಾಧ್ಯಮಗಳ‌ ಸೃಷ್ಟಿ. ಈ ಬಗ್ಗೆ ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ.
ಎಂದು ನವೆಂಬರ್ ಕ್ರಾಂತಿ ಯ ಬಗ್ಗೆ ಅಲ್ಲಗೆಳೆದರು .

ರಾಜ್ಯದಲ್ಲಿ ನಮ್ಮ ಪಕ್ಷವು ಐದು ವರ್ಷ ಆಡಳಿತ ನಡೆಸಲು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ.

ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀನ, ಇಲ್ಲವಾ ಎಂಬುದೇ ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ ರಚನೆ ಮಾಡಬಹುದು ಎಂದು ತಿಳಿಸಿದ್ದ ನಂತರವಷ್ಟೇ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು.

ಬೆಂಗಳೂರಿನಲ್ಲಿ ನಡೆದ ಎಟಿಎಂ ವಾಹನ ದರೋಡೆ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು.

CM Siddharamaiah ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು, ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...