Monday, May 4, 2026
Monday, May 4, 2026

Shivamogga Municipal Corporation ಬೀದಿ ನಾಯಿಗಳ ಕಾಟ ತಡೆಯಲು ಮಹಾನಗರ ಪಾಲಿಕೆಯಿಂದ ಸಾರ್ವಜನಿಕ ಮಾಹಿತಿ ಪ್ರಕಟಣೆ

Date:

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಆಯುಕ್ತರು/ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ)/ಪರಿಸರ ಅಭಿಯಂತರರು, ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳಿಗೆ ತಿಳಿಸುವುದು ಹಾಗೂ healthcitycorporation@gmail.com ಗೆ ಇ-ಮೇಲ್ ಮಾಡುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ಧಾರಿಯುವ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...