Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮೆಟ್ರೋ ಯುನೈಟೆಡ್ ಆಸ್ಪತ್ರೆ, ಶಿವಮೂತಿ ಸರ್ಕಲ್, ಸವಳಂಗ ರಸ್ತೆ, ಶಿವಮೊಗ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಶಾ ಇನ್ಟ್ರಾ ಟವರ್ಸ್ ಪ್ರೈ..ಲಿ., ಕರೂರ್ ಕೈಗಾರಿಕಾ ಪ್ರದೇಶ, ಪಿ.ಬಿ.ರಸ್ತೆ, ದಾವಣಗೆರೆ, ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
Nidhi Apke Nikat ನವೆಂಬರ್ 27.ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ
Date:
