Friday, December 5, 2025
Friday, December 5, 2025

B.Y.Raghavendra ಇಂದಿನ ಯುವ ಸಮೂಹವು ಸ್ವಾತಂತ್ರ್ಯ ಯೋಧರು & ಹೆಮ್ಮೆಯ ಸೈನಿಕರನ್ನ ಗೌರವಿಸಬೇಕು- ಸಂಸದ ಬಿ.ವೈ.ರಾಘವೇಂದ್ರ

Date:

B.Y.Raghavendra ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ನಾಯಕರನ್ನು ಸ್ಮರಿಸಿಕೊಂಡು ನಾವೆಲ್ಲ ಅವರ ಮಾರ್ಗದಲ್ಲಿ ಸಾಗುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಕರೆ ನೀಡಿದರು.

ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲರ 150 ನೇ ಜನ್ಮದಿನೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಏಕತಾ ನಡಿಗೆ ಜಾಥಾವನ್ನು ಗೋವು ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮತಾನಾಡಿದರು.

ಭಾರತ ದೇಶ ಸ್ವತಂತ್ರಗೊಂಡ ನಂತರ ದೇಶದ 552 ಸಂಸ್ಥಾನಗಳನ್ನು ಒಟ್ಟುಗೂಡಿಸಿದ ಕೀರ್ತಿ ದೇಶದ ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರಿಗೆ ಸಲ್ಲುತ್ತದೆ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಕಾಶ್ಮೀರದ ರಾಜಾ ಹರಿಸಿಂಗ್ ಅವರ ಮನವೊಲಿಸಿ ಕಾಶ್ಮೀರವನ್ನು ಭಾರತ ದೇಶದ ಸಂವಿಧಾನದ ಅಡಿಯಲ್ಲಿ ಸೇರ್ಪಡೆ ಮಾಡಲಾಯಿತು.

ಇಂದಿನ ಯುವ ಸಮೂಹವು ನಮ್ಮ ಸ್ವಾತಂತ್ರö್ಯ ಯೋಧರು ಮತ್ತು ಹೆಮ್ಮೆಯ ಸೈನಿಕರನ್ನು ಗೌರವಿಸಬೇಕು. ಈ ದೇಶದ ಮಣ್ಣಿನಲ್ಲಿ ಎಲ್ಲಾ ರೀತಿಯ ಶಕ್ತಿಯಿದೆ. ಅದನ್ನು ಸರಿಯಾದ ರೀತಿಯಲ್ಲಿ ನಾವೆಲ್ಲಾ ಬಳಸಿಕೊಳ್ಳಬೇಕು. ಹಾಗೂ ಒಂದಾಗಿ ಸದೃಢ ಭಾರತ ದೇಶವನ್ನು ನಿರ್ಮಾಣ ಮಾಡುವಂತಹ ಕೆಲಸ ಮಾಡಬೇಕಿದೆ ಎಂದರು.

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತಾನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆಯನ್ನು ನಿರ್ಮಾಣ ಮಾಡಿದರು ಎಂದ ಅವರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಭಗತ್ ಸಿಂಗ್, ರಾಜಗುರು, ಸುಖದೇವ್, ಚಂದ್ರಶೇಖರ್ ಆಜಾದ್ ಅವರಂತಹ ನಾಯಕರ ಜೀವನ ಚರಿತ್ರೆಯನ್ನು ಇಂದಿನ ಯುವಕರು ತಿಳಿದುಕೊಳ್ಳುವ ಅವಶ್ಯಕತೆಯಿದೆ ಎಂದರು.

ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಮಾತಾನಾಡಿ, ನಾವೆಲ್ಲಾ ಒಂದೇ ಎಂದು ಹೇಳಲು ಕಾರಣ ಪಟೇಲರು. 1928 ರಲ್ಲಿ ಗುಜರಾತಿನಲ್ಲಿ ನಡೆದ ಬಾರ್ಡೋಲಿ ರೈತ ಚಳುವಳಿಯಲ್ಲಿನ ವಲ್ಲಭಬಾಯಿ ಪಟೇಲರ ನಾಯಕತ್ವವನ್ನು ಮೆಚ್ಚಿ ಬಾರ್ಡೋಲಿಯ ರೈತರು ಅವರಿಗೆ “ಸರ್ದಾರ್” ಎಂಬ ಬಿರುದು ನೀಡಿದರು. ಭಾರತದ ಪ್ರಥಮ ಗೃಹ ಸಚಿವರಾಗಿ ದೇಶದ ಎಲ್ಲಾ ರಾಜ್ಯಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾಡಿದರು.

ಇದರ ಫಲವಾಗಿ ‘ನಾವೆಲ್ಲಾ ಒಂದೇ’ ಎಂಬ ‘ಏಕ್ ಭಾರತ್ ಶ್ರೇಷ್ಠ ಭಾರತ್’ ಏಕತಾ ನಡಿಗೆ ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ನಾವೆಲ್ಲಾ ಒಂದೇ ಎಂಬ ಹಾಗೂ ನಶೆಮುಕ್ತ ಭಾರತ್ ಅಭಿಯಾನದ ಪ್ರತಿಜ್ಞಾವಿಧಿಗಳನ್ನು ಬೋಧಿಸಲಾಯಿತು.

B.Y.Raghavendra ಜಾಥಾ ನಗರದ ನೆಹರು ಸ್ಟೇಡಿಯಂ ನಿಂದ ಹೊರಟು ಮಹಾವೀರ ಸರ್ಕಲ್, ಜೈಲ್ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಫ್ರೀಡಂ ಪಾರ್ಕ್ ತಲುಪಿತು. ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆ ಮೂಲಕ ಯುವಜನರಲ್ಲಿ ದೇಶ ಪ್ರೇಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಏಕತಾ ಜಾಥಾದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಅಧಿಕಾರಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...