ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೪೧ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ನವುಲೆಯ ಅರ್ಪಿತಾ ಭಜನಾ ಮಂಡಳಿ ಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ದಾವಣಗೆರೆ ಆಶ್ರಮದ ಗಾಯಕ ಉದಯ ರಾಣೆಬೆನ್ನೂರು ಅವರ ಸಂಗೀತ ಕಾರ್ಯಕ್ರಮ ನೋಡುಗರ ಮನ ಸೆಳೆಯಿತು.
