Monday, February 2, 2026
Monday, February 2, 2026

CM Siddharamaiah ಮೀನುಗಾರಿಕಾ ವಿವಿ ಸ್ಥಾಪನೆಗೆ ಸರ್ಕಾರ ಸಿದ್ಧವಿದೆ- ‘ಸೀಎಂ’ ಸಿದ್ಧರಾಮಯ್ಯ

Date:

CM Siddharamaiah ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ.
ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಮೀನುಗಾರಿಕೆ ಇಲಾಖೆ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.

ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ.

CM Siddharamaiah ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.

ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...